Business

ಸೆ.20ರಂದು ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಮಹಾಸಭೆ

ವಿಶ್ವೇಶ್ವರಯ್ಯ ಭವನದಲ್ಲಿ ಗಣನೀಯ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನವೂ ಜರುಗಲಿದೆ

avatar
ಸಿಬ್ಬಂದಿ ವರದಿ
ಸೆಪ್ಟೆಂ 22,2026 · 1 ನಿಮಿಷ ಓದು
ಫೋಟೋ

ಹಾಸನ: ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನೌಕರರ ಸನ್ಮಾನ ಸಮಾರಂಭವನ್ನು ಸೆ.20ರಂದು ಭಾನುವಾರ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಕೆ. ರುದ್ರಪ್ಪ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಸಹಕಾರ ಸಂಘಗಳ ಉಪನಿರ್ದೇಶಕ ಕೆ.ಕೆ. ಕಿರಣ್ ಕುಮಾರ್ ಉದ್ಘಾಟಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಜಿಲ್ಲಾಧ್ಯಕ್ಷ ಬಾಗೂರು ಮಂಜೇಗೌಡ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಬಿ.ಕೆ. ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ಹಿರಿಯ ವಕೀಲ ಕೆ.ಆರ್. ಮಂಜೇಗೌಡ ಹಾಗೂ ಲೆಕ್ಕ ಪರಿಶೋಧಕ ಸಿ.ಕೆ. ಪದ್ಮನಾಭ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ. ಸಂಘದ ಸದಸ್ಯರು ಹಾಗೂ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.